ಬೆಂಗಳೂರು: ಖ್ಯಾತ ನಟ, ಮಾಜಿ ವಿಧಾನ ಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರು ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದರು . ಈಗ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗುತ್ತಿದ್ದಾರೆ.
ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಪರಾಗ್ ಹೋಟೆಲ್ ನಲ್ಲಿ ಹಿರಿಯ ನಾಯಕ ಎಎಪಿ ರಾಜ್ಯಾಧ್ಯಕ್ಷರಾದ ಪೃಥ್ವಿರೆಡ್ಡಿ ಅವರ ಸಮ್ಮುಖ ದಲ್ಲಿಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಕಾಂಗ್ರೆಸ್ ಪಕ್ಷ ತೋರೆದ ಬೆನ್ನಲ್ಲೇ ಮುಖ್ಯಮಂತ್ರಿ ಚಂದ್ರು ಅವರಿಗೆ ಪೃಥ್ವಿರೆಡ್ಡಿ ಮತ್ತು ಪಕ್ಷದ ಮುಖಂಡರ ನಿಯೋಗ ಭೇಟಿಯಾಗಿ ಪಕ್ಷಕ್ಕೆ ಸೇರ್ಪಡೆಯಾಗಲು ಅಹ್ವಾನಿಸಿದ್ದರು.