ಅತ್ಯಾಚಾರ ಆರೋಪ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲುಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುನಿರತ್ನರನ್ನು ಮತ್ತೆ ಬಂಧಿಸಲಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಮನಗರ ಪೊಲೀಸರು ಮುನಿರತ್ನರನ್ನು ಇಂದು ಬೆಳಗ್ಗೆ ಬಂಧಿಸಿದ್ದಾರೆ. ಮುನಿರತ್ನ ವಿರುದ್ಧ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಜಾತಿನಿಂದನೆ ಪ್ರಕರಣದಲ್ಲಿ ಅವರಿಗೆ ಗುರುವಾರವಷ್ಟೇ ಜಾಮೀನು ಮಂಜೂರಾಗಿತ್ತು. ಜೈಲಿನಿಂದ ಹೊರಬಂದ ಕೂಡಲೇ ಇದೀಗ ಮತ್ತೆ ಬಂಧನಕ್ಕೊಳಗಾಗಿದ್ದಾರೆ.