ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು

Date:

ಬೆಂಗಳೂರು : ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ನಾನು ಪ್ರಮೋದ್ ಮುತಾಲಿಕ್ ಅವರಿಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿಗಳು, ಸಚಿವರು ಈ ಬಗ್ಗೆ ಉತ್ತರ ನೀಡಬೇಕು. ಈ ಎಲ್ಲವನ್ನು ಬಿಜೆಪಿ ಹಾಗೂ ಬಿಜೆಪಿ ಸರ್ಕಾರವೇ ಹೇಳಿಸುತ್ತಿದೆ. ಹಳೇ ಮೈಸೂರು ಸೇರಿದಂತೆ ಅನೇಕ ಭಾಗಗಳಲ್ಲಿ ಅವರು ಈ ರೀತಿ ಪ್ರಚೋದಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಆಮೇಲೆ ಮಾತಾಡುತ್ತೇನೆ. ಈ ವಿಚಾರವಾಗಿ ಮೊದಲು ಮುಖ್ಯಮಂತ್ರಿಗಳು ಉತ್ತರಿಸಲಿ’ ಎಂದು ಡಿಕೆಶಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...