ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಯುವತಿಯ ಅಂಗಾಂಗಗಳನ್ನು ದಾನ ಮಾಡಲು ಪೋಷಕರು ನಿರ್ಧರಿಸಿದ್ದಾರೆ.
ಹಾಸನ ಮೂಲದ ನಮನ ಎಂಬ 21 ವರ್ಷದ ಯುವತಿ ಅಪಘಾತದಿಂದ ತೀವ್ರ ರಕ್ತಸ್ರಾವಕ್ಕೆ ಒಳಗಾಗಿದ್ದರು. ಇವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಮನ ಬದುಕುಳಿಯುವುದು ಕಷ್ಟ ಎಂದು ತಿಳಿದ ಪೋಷಕರು ಆಕೆಯ ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ.
ಸದ್ಯ ನಮನ ಅವರ ಕಿಡ್ನಿ ಮತ್ತು ಶ್ವಾಸಕೋಶವನ್ನು ಜೀರೋ ಟ್ರಾಫಿಕ್ ನಲ್ಲಿ ಮೈಸೂರಿನಿಂದ ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಸಾಗಿಸಲಾಗಿದೆ.