ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕು ಎನ್ನುವ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಣಯಕ್ಕೆ ಕನ್ನಡಪರ ಸಂಘಟನೆಗಳಿಂದ ಒಕ್ಕೂರಲ ಬೆಂಬಲ ಸಿಕ್ಕಿದೆ.
ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಕನ್ನಡಪರ ಮುಖಂಡರ ಸಭೆಯಲ್ಲಿ ನಾಡಧ್ವಜ ಮತ್ತದರ ವಿನ್ಯಾಸಕ್ಕೆ ಒಪ್ಪಿಗೆ ಸಿಕ್ಕಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸರ್ಕಾರ ರಚಿಸಿದ್ದ ಸಮಿತಿ ವಿನ್ಯಾಸಗೊಳಿಸಿರೋ ಧ್ವಜಕ್ಕೆ ಕನ್ನಡಪರ ಸಂಘಟನೆಗಳು ಸಹಮತ ನೀಡಿವೆ.