ನಜರ್‌ಬಾದ್‌ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ

Date:

ನಜರ್ಬಾದ್ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕುಖ್ಯಾತ ಕಳ್ಳನನ್ನು ಬಂಧಿಸಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಸಮಯದಲ್ಲಿ ಕಳ್ಳತನ ನಡೆದಿದ್ದು, ಬಂಧಿತನಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ 163 ಗ್ರಾಂ. ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಚಾಮರಾಜನಗರದಿಂದ ಮೈಸೂರಿಗೆ ಫ್ಲವರ್ ಶೋ ನೋಡಲು ಬಂದಿದ್ದ ಕುಟುಂಬ ತಮ್ಮ ಆದಾಯ ತೆರಿಗೆ ಕಚೇರಿ ಬಳಿ ಪಾರ್ಕ್ ಮಾಡಿತ್ತು. ಆ ವೇಳೆ ಕಾರಿನಲ್ಲಿದ್ದ ಚಿನ್ನದ ಆಭರಣಗಳು ಕಳ್ಳತನವಾಗಿದ್ದು, ಈ ಬಗ್ಗೆ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಆರೋಪಿಯನ್ನ ನಜರ್ಬಾದ್ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಇನ್ನ ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಶಿಧರ್.ಎಂಎನ್
ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...