ಪೊಲೀಸರಿಗೆ ಶರಣಾದ ಶಾಸಕ‌ ಹ್ಯಾರೀಸ್ ಪುತ್ರ

admin
By admin
0 Min Read

ಯುವಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಕೊನೆಗೂ ಪೊಲೀಸರಿಗೆ ಶರಣಾಗಿದ್ದಾನೆ.‌


ಶನಿವಾರ ರಾತ್ರಿ ವಿದ್ವತ್ ಎಂಬ ಯುವಕನ ಮೇಲೆ ನಲಪಾಡ್ ಮತ್ತವನ ಸ್ನೇಹಿತರು ಸೇರಿ ಮಾರಣಾಂತಿಕ‌ ಹಲ್ಲೆ ನಡೆಸಿದ್ದರು. ಗಾಯಾಳು ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಲಪಾಡ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಪರಾರಿಯಾಗಿದ್ದ ಆರೋಪಿ ನಲಪಾಡ್ ಇಂದು ಬೆಳಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ‌ ಶರಣಾಗಿದ್ದಾನೆ.

Share This Article