No menu items!
14 C
Munich
Monday, April 20, 2026

ಕರ್ನಾಟಕಕ್ಕೆ ಬಂದ ಸೋನಿಯಾಗೆ ಲೇವಡಿ ಮಾಡಿದ ಕಟೀಲ್

Must read

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಬಂದಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಮಗನ ರಾಜಕೀಯ ಭವಿಷ್ಯಕ್ಕಾಗಿ ಎರಡು ದಿನದ ಮಟ್ಟಿಗೆ ಕರ್ನಾಟಕಕ್ಕೆ ಆಗಮಿಸಿರುವ ಸೋನಿಯಾ ಗಾಂಧಿಯವರಿಗೆ ಸಿಎಂ ಕುರ್ಚಿಯ ಭ್ರಮೆಯಲ್ಲಿ ಕಾದಾಡುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಒಂದುಗೂಡಿಸಲು ವರ್ಷ ಸಾಕಾಗುವುದಿಲ್ಲ ಎಂದು ಅನಿಸುತ್ತಿದೆ. ಮೊದಲು ಇವರಿಬ್ಬರನ್ನು ಜೋಡಿಸಿ ನಂತರ ಮುಂದುವರೆಯಲು ಅವರು ಮಗನಿಗೆ ಹೇಳಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇನ್ನೂ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಬಂದಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article