ಇನ್ಮುಂದೆ ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯ : ಸುಪ್ರೀಕೋರ್ಟ್‍ನ ಮಹತ್ವದ ಆದೇಶ..!

admin
By admin
1 Min Read

ಇನ್ನುಂದೆ ದೇಶದ ಎಲ್ಲಾ ಸಿನಿಮಾ ಮಂದಿರಗಳಲ್ಲೂ ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಇಂದು (ನವೆಂಬರ್ 30) ಮಹತ್ವದ ಆದೇಶ ಹೊರಡಿಸಿದೆ..!
ಕೋರ್ಟ್ ಆದೇಶ ನೀಡಿದಂತೆ ಇನ್ಮುಂದೆ ಎಲ್ಲಾ ಸಿನಿಮಾ ಮಂದಿರದಲ್ಲಿ ಸಿನಿಮಾ ಆರಂಭಕ್ಕೂ ಮುನ್ನ ರಾಷ್ಟ್ರಧ್ವಜ ಪ್ರದರ್ಶಿಸಬೇಕು ಹಾಗೂ ರಾಷ್ಟ್ರಗೀತೆಯನ್ನು ಮೊಳಗಿಸಬೇಕು ಎಂದು ಆದೇಶ ನೀಡಿದೆ. ಅಲ್ಲದೇ ರಾಷ್ಟ್ರಗೀತೆ ಜನ ಗಣ ಮನ ಮೊಳಗುವ ವೇಳೆ ಎಲ್ಲರೂ ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಅರ್ಪಿಸಬೇಕೆಂದು ತಿಳಿಸಿದ್ದು, ಈ ಕುರಿತು ಕೇಂದ್ರ ಸರ್ಕಾರ ಈ ಕೂಡಲೆ ಅಧಿಸೂಚನೆ ಹೊರಡಿಸಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಇನ್ನು ಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಈಗಾಗಲೇ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲು ಮುಂದಾಗಿದೆ. ಅಲ್ಲದೇ ಈ ಅಧಿಸೂಚನೆಗಳನ್ನು ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಜನರಿಗೆ ತಿಳಿಸಬೇಕು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಕ್ ಮೀಶ್ರಾ ಹೇಳಿದ್ದಾರೆ. ಯಾವುದೇ ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಮೊಟಕುಗೊಳಿಸುವಂತಿಲ್ಲ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡುವಂತಿಲ್ಲ ಎಂದು ಕೋರ್ಟ್ ಆದೇಶ ನೀಡಿದೆ.

Like us on Facebook  The New India Times

POPULAR  STORIES :

ಯಶ್-ರಾಧಿಕಾ ಪಂಡಿತ್ ಎಂಗೇಜ್‍ಮೆಂಟ್ ವಿಡಿಯೋ ರಿಲೀಸ್.!

ಚಿನ್ನದ ಬೆಲೆ ದಿಢೀರ್ ಕುಸಿತ..!

ತಮಿಳು ಚಿತ್ರ ನಟ ಧನುಷ್ ತಮ್ಮ ಮಗನೆಂದು ಮುಧುರೈ ದಂಪತಿ ಕೊರ್ಟ್‍ಗೆ ದೂರು..!

500ರೂ. ಹೊಸ ನೋಟಿನಲ್ಲಿ ತಪ್ಪು: ಆರ್‍ಬಿಐ ಸ್ಪಷ್ಟನೆ

Share This Article