No menu items!
25.8 C
Munich
Saturday, July 18, 2026

ಜೂನ್ 21ರಂದು NEET-UG ಮರು ಪರೀಕ್ಷೆ; ಎನ್ಟಿಎ ಅಧಿಕೃತ ಪ್ರಕಟಣೆ

Must read

ಜೂನ್ 21ರಂದು NEET-UG ಮರು ಪರೀಕ್ಷೆ; ಎನ್ಟಿಎ ಅಧಿಕೃತ ಪ್ರಕಟಣೆ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಜೂನ್ 21ರಂದು NEET-UG ಮರು ಪರೀಕ್ಷೆ ನಡೆಸುವುದಾಗಿ ಅಧಿಕೃತವಾಗಿ ಘೋಷಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮ ಆರೋಪಗಳ ಹಿನ್ನೆಲೆ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಮೇ 3ರಂದು ನಡೆದಿದ್ದ NEET-UG ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿತ್ತು. ಇದೀಗ ಮರು ಪರೀಕ್ಷೆಗೆ ಹೊಸ ದಿನಾಂಕ ನಿಗದಿಪಡಿಸಿರುವುದಾಗಿ ಎನ್ಟಿಎ ತಿಳಿಸಿದೆ.
ಈ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (CBI) ಮುಂದುವರಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅಥವಾ ನವೀಕರಣಗಳಿಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಎನ್ಟಿಎಯ ಅಧಿಕೃತ ವೆಬ್ಸೈಟ್ ಮತ್ತು ಅಧಿಕೃತ ಸಾಮಾಜಿಕ ಜಾಲತಾಣಗಳನ್ನು ಮಾತ್ರ ಅವಲಂಬಿಸಬೇಕು ಎಂದು ಸಂಸ್ಥೆ ಮನವಿ ಮಾಡಿದೆ.

- Advertisement -spot_img

More articles

- Advertisement -spot_img

Latest article