No menu items!
25.3 C
Munich
Saturday, July 25, 2026

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳ ಹೋರಾಟಕ್ಕೆ ಮೊದಲ ಗೆಲುವು

Must read

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳ ಹೋರಾಟಕ್ಕೆ ಮೊದಲ ಗೆಲುವು

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಕೇಂದ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ನಡುವೆಯೇ ಈ ನಿರ್ಧಾರ ಹೊರಬಿದ್ದಿದ್ದು, ವಿದ್ಯಾರ್ಥಿಗಳ ಹೋರಾಟಕ್ಕೆ ಪ್ರಮುಖ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ.

ಶನಿವಾರ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಮೂರನೇ ಸುತ್ತಿನ ಮಹತ್ವದ ಮಾತುಕತೆ ನಿಗದಿಯಾಗಿತ್ತು. ಆದರೆ ಸಭೆ ಆರಂಭವಾಗುವ ಮುನ್ನವೇ ಧರ್ಮೇಂದ್ರ ಪ್ರಧಾನ್ ತಮ್ಮ ರಾಜೀನಾಮೆ ಘೋಷಿಸಿರುವುದು ರಾಜಕೀಯ ಹಾಗೂ ಶೈಕ್ಷಣಿಕ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉದ್ದೇಶಿಸಿ ಬರೆದಿರುವ ಎರಡು ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ರಾಜೀನಾಮೆಯನ್ನು ಪ್ರಧಾನಿಗೆ ಸಲ್ಲಿಸಿರುವುದಾಗಿ ಅವರು ಅಧಿಕೃತವಾಗಿ ತಿಳಿಸಿದ್ದಾರೆ.

ರಾಜೀನಾಮೆ ಪತ್ರದಲ್ಲಿ, “ಈ ವಿಚಾರವನ್ನು ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ” ಎಂದು ಉಲ್ಲೇಖಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶದ ವಿವಿಧ ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ನಿರ್ಮಾಣವಾಗಿತ್ತು. ಈ ಬೆಳವಣಿಗೆಗಳ ನಡುವೆಯೇ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ರಾಜಕೀಯದಲ್ಲಿ ಮಹತ್ವದ ತಿರುವು ನೀಡಿರುವ ಬೆಳವಣಿಗೆಯಾಗಿ ವಿಶ್ಲೇಷಿಸಲಾಗುತ್ತಿದೆ.

- Advertisement -spot_img

More articles

- Advertisement -spot_img

Latest article