ಇನ್ನೇನು ಕೆಲ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದ್ದು ಎಲ್ಲಾ ಪಕ್ಷಗಳು ತನ್ನದೆ ಆದ ರೀತಿಯಲ್ಲಿ ತಯಾರಿಗಳನ್ನ ಮಾಡಿಕೊಳ್ಳುತ್ತಿವೆ. ಈ ನಡುವೆ ಪಕ್ಷಕ್ಕೆ ಸೇರ್ಪಡೆ ಆಗುವವರು , ಪಕ್ಷವನ್ನ ತೊರೆಯುವವರು ಕಂಡು ಬರೋದು ಸರ್ವೆ ಸಾಮಾನ್ಯ. ಆದ್ರೆ ಈಗ ವಿಶೇಷತೆ ಏನಂದರೆ ಲವ್ಲಿ ಸ್ಟಾರ್ ಪ್ರೇಮ್ ಕಾಂಗ್ರೆಸ್ ಪಕ್ಷವನ್ನ ಸೇರುತ್ತಿದ್ದಾರೆ ಅನ್ನೊ ಮಾಹಿತಿ ಹೊರ ಬಿದ್ದಿದೆ.
ಇನ್ನೂ2024 ರಲ್ಲಿ ನಡೆಯುವ ಚುನಾವಣೆ ಕಾಂಗ್ರೆಸ್ ಗೆ ಪ್ರತಿಷ್ಠೆಯಾಗಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗಾಗಲೇ ಅಸಮಾಧಾನಿತ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಗಾಳ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ 28 ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ಕುರಿತು ಟಾರ್ಗೆಟ್ ನೀಡಿದ್ದಾರೆ.
ಹೈಕಮಾಂಡ್ ಹಾಕಿಕೊಟ್ಟ ಸೂತ್ರಕ್ಕೆ ತಕ್ಕಂತೆ ರಾಜ್ಯ ಕಾಂಗ್ರೆಸ್ ನಾಯಕರು ಹಲವು ತಂತ್ರಗಾರಿಕೆಯನ್ನ ನಡೆಸಿದ್ದಾರೆ. ಖ್ಯಾತ ಚಿತ್ರನಟರಾದ ನೆನಪಿರಲಿ ಪ್ರೇಮ್ ಅವರು ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಜೊತೆಗೆ ಮಾತುಕತೆ ನಡೆಸಿದ್ದು, ಇನ್ನೂ ಪಕ್ಷ ಸೇರ್ಪಡೆ ಕುರಿತು ಡಿ ಕೆ ಶಿವಕುಮಾರ್ ಅವರು ಚರ್ಚೆ ನಡೆಸಿದ್ದಾರಂತೆ. ಲೋಕಸಭಾ ಚುನಾವಣೆ ಹಿನ್ನಲೆ ಅತೀ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಠಕ್ಕರ್ ಕೊಡಲು ಕಾಂಗ್ರೆಸ್ ನಾಯಕರು ಬಿಗ್ ಪ್ಲಾನ್ ರೆಡಿ ಮಾಡಿದ್ದಾರೆ. ಅದರಂತೆ ಹಲವು ನಾಯಕರಿಗೆ ಗಾಳ ಹಾಕಿತ್ತಿದ್ದು, ಚಿತ್ರ ನಟ ಹಾಗೂ ನಟಿಯವ ಜೊತೆಗೂ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ.