ನೇಪಾಳದಲ್ಲಿ ಭೀಕರ ಪ್ರವಾಹ ದುರಂತ: 8 ಸಾವು, 41 ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

Must read

ನೇಪಾಳದಲ್ಲಿ ಭೀಕರ ಪ್ರವಾಹ ದುರಂತ: 8 ಸಾವು, 41 ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 41 ಭದ್ರತಾ ಸಿಬ್ಬಂದಿ ಸೇರಿ ನೂರಾರು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಭೋಟೆ ಕೋಶಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದ ಬಳಿಕ ನೂರಾರು ಜನ ಕಾಣೆಯಾಗಿದ್ದಾರೆ. ಕಾಣೆಯಾಗಿರುವ 41 ಭದ್ರತಾ ಸಿಬ್ಬಂದಿ ಪೈಕಿ 32 ಮಂದಿ ನೇಪಾಳ ಪೊಲೀಸರಾಗಿದ್ದು, 9 ಮಂದಿ ಸಶಸ್ತ್ರ ಪೊಲೀಸ್ ಪಡೆಗೆ ಸೇರಿದವರಾಗಿದ್ದಾರೆ. ಈವರೆಗೆ 8 ಶವಗಳನ್ನು ಪತ್ತೆಹಚ್ಚಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ಯುದ್ಧೋಪಾದಿಯಲ್ಲಿ ಮುಂದುವರಿದಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ನದಿ ದಂಡೆಯ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಭೋಟೆ ಕೋಶಿ ನದಿಯ ಉದ್ದಕ್ಕೂ ವಾಸಿಸುವವರು ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ನೇಪಾಳ-ಟಿಬೆಟ್ ಗಡಿಯ ಬಳಿಯಿರುವ ರಸುವಾ ಜಿಲ್ಲೆಯಲ್ಲಿ ಇಡೀ ಗ್ರಾಮವೊಂದು ಕೊಚ್ಚಿಹೋಗಿದ್ದು, ಸುಮಾರು 1,000 ಜನರು ಪ್ರವಾಹದಲ್ಲಿ ಕೊಚ್ಚಿಹೋಗಿರಬಹುದೆಂದು ಶಂಕಿಸಲಾಗಿದೆ. ಆದರೆ ಈ ಅಂಕಿ-ಅಂಶ ಇನ್ನೂ ಅಧಿಕೃತವಾಗಿಲ್ಲ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸುತ್ತಿವೆ.
ರಸುವಾ ಜಿಲ್ಲೆಯಲ್ಲಿ ಉಂಟಾದ ಈ ಹಠಾತ್ ಪ್ರವಾಹ ಹಲವು ಪ್ರದೇಶಗಳಲ್ಲಿ ವ್ಯಾಪಕ ಹಾನಿ ಉಂಟುಮಾಡಿದೆ. ಸ್ಯಾಪ್ರುಬೆಸಿ ಮತ್ತು ತಿಮುರೆ ಪರ್ವತ ಪ್ರದೇಶಗಳು ತೀವ್ರವಾಗಿ ಬಾಧಿತವಾಗಿದ್ದು, ಕೆಲವು ಹಳ್ಳಿಗಳೇ ಕೊಚ್ಚಿಹೋಗಿವೆ. ಜೊತೆಗೆ ಹಲವು ಯೋಜನಾ ಸ್ಥಳಗಳೂ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿವೆ ಎಂದು ವರದಿಯಾಗಿದೆ.

- Advertisement -spot_img

More articles

- Advertisement -spot_img

Latest article