ಅಕ್ಟೋಬರ್ ನಲ್ಲಿ ಬರಲಿದ್ದಾಳೆ ವಾಸಂತಿ

Date:

ಜೇನುಗೂಡು ಸಿನಿಮಾ ಬ್ಯಾನರ್ ನಡಿ ಕೆ.ಎನ್.ಶ್ರೀಧರ್ ನಿರ್ಮಾಣ ಮಾಡಿರುವ ವಾಸಂತಿ ನಲಿದಾಗ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ . ಈಗ ಕೇಳ್ರಪ್ಪೋ ಕೇಳಿ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಬೆಂಗಳೂರಿನ ಕಲಾವಿದರ ಸಂಘದಲ್ಲಿ ಟ್ರೇಲರ್ ರಿಲೀಸ್ ಮಾಡಲಾಯಿತು. ಈ ವೇಳೆ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿತು.

ನಿರ್ದೇಶಕ ರವೀಂದ್ರ ವೆಂಶಿ ಮಾತನಾಡಿ, ಒಂದೊಳ್ಳೆ ತಂಡ ಸೇರಿಕೊಂಡು ಸಿನಿಮಾ ಮಾಡಿದ್ದೇವೆ. ಒಂದು ವರ್ಷದ ಜರ್ನಿ ಇದು. ಯೂತ್ ಫುಲ್ ಎಂಟರ್ ಟ್ರೈನ್ಮೆಂಟ್ ಚಿತ್ರವಿದು. ಕಂಟೆಂಟ್ ತುಂಬಾ ಚೆನ್ನಾಗಿದೆ ಪ್ರತಿಯೊಬ್ಬರು ಸಪೋರ್ಟ್ ಮಾಡಿ ಎಂದು ಮನವಿ ಮಾಡಿಕೊಂಡರು.

ಕಾಲೇಜ್ ಸ್ಟೋರಿ ಜೊತೆಗೆ ಒಂದೊಳ್ಳೆ ಪ್ರೇಮಕಥನ ಒಳಗೊಂಡಿರುವ ವಾಸಂತಿ ನಲಿದಾಗ ಸಿನಿಮಾಗೆ ರವೀಂದ್ರ ವೆಂಶಿ ಆಕ್ಷನ್ ಕಟ್ ಹೇಳಿದ್ದು, ರೋಹಿತ್ ಶ್ರೀಧರ್ ನಾಯಕನಾಗಿ, ಭಾವನಾ ಶ್ರೀನಿವಾಸ್ ನಾಯಕಿಯಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ . ಉಳಿದಂತೆ ಜೀವಿತ ವಸಿಷ್ಠ, ಸಾಯಿಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಸೇರಿದಂತೆ ಒಂದಷ್ಟು ಅನುಭವಿ ಕಲಾವಿದರು ಸಿನಿಮಾದಲ್ಲಿದ್ದಾರೆ. ಚಿತ್ರಕ್ಕೆ ಶ್ರೀಗುರು ಸಂಗೀತವಿದ್ದು, ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ಗೌಸ್ ಪೀರ್ ಸಾಹಿತ್ಯವಿದೆ. ಸಿ.ರವಿಚಂದ್ರನ್ ಸಂಕಲನ, ಪ್ರಮೋದ್ ಭಾರತೀಯ ಛಾಯಾಗ್ರಾಹಣವಿದೆ. ಟ್ರೇಲರ್ ರಿಲೀಸ್ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕರ ಮುನ್ನುಡಿ ಬರೆದಿರುವ ಚಿತ್ರತಂಡ ಮುಂದಿನ ಅಕ್ಟೋಬರ್ 14ಕ್ಕೆ ಸಿನಿಮಾವನ್ನು ತೆರೆಗೆ ತರಲಿದೆ.

Share post:

Subscribe

spot_imgspot_img

Popular

More like this
Related

ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ರಸ್ತೆ ಬದಿ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ಹೊಸ ನಿಯಮಕ್ಕೆ ಸಜ್ಜು

ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ರಸ್ತೆ ಬದಿ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ಹೊಸ ನಿಯಮಕ್ಕೆ...

ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅಶ್ಲೀಲ ಕಾಮೆಂಟ್: ಮತ್ತಿಬ್ಬರು ಆರೋಪಿಗಳ ಬಂಧನ

ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅಶ್ಲೀಲ ಕಾಮೆಂಟ್: ಮತ್ತಿಬ್ಬರು ಆರೋಪಿಗಳ ಬಂಧನ ಬೆಂಗಳೂರು: ನಟಿ...

ತುರ್ತು Z ಶ್ರೇಣಿ ಭದ್ರತೆ ನೀಡುವಂತೆ ಸಿಎಂ ಸೇರಿ ಕೇಂದ್ರ–ರಾಜ್ಯ ನಾಯಕರಿಗೆ ಜನಾರ್ದನ ರೆಡ್ಡಿ ಪತ್ರ

ತುರ್ತು Z ಶ್ರೇಣಿ ಭದ್ರತೆ ನೀಡುವಂತೆ ಸಿಎಂ ಸೇರಿ ಕೇಂದ್ರ–ರಾಜ್ಯ ನಾಯಕರಿಗೆ...

ರಾಜಧಾನಿಯಲ್ಲಿ ವಾಯು ಗುಣಮಟ್ಟ ಕಳಪೆ; ಹಲವು ಪ್ರದೇಶಗಳಲ್ಲಿ ‘ಅನಾರೋಗ್ಯಕರ’ ಮಟ್ಟ

ರಾಜಧಾನಿಯಲ್ಲಿ ವಾಯು ಗುಣಮಟ್ಟ ಕಳಪೆ; ಹಲವು ಪ್ರದೇಶಗಳಲ್ಲಿ ‘ಅನಾರೋಗ್ಯಕರ’ ಮಟ್ಟ ಬೆಂಗಳೂರು: ಬೆಂಗಳೂರಿನ...