ಉಡುಂಬಾ ನಿರ್ದೇಶಕರಿಂದ ಮತ್ತೊಂದು ಹೊಸ ಸಿನಿಮಾ

Date:

‘ಐ 1’, ‘ಮೃತ್ಯುಂಜಯ’ ಸಿನಿಮಾ ನಿರ್ಮಿಸಿರುವ ಎಸ್ ಪಿ ಪಿಕ್ಚರ್ಸ್ ನಿರ್ಮಾಣದ , ‘ಉಡುಂಬಾ’ ಸಿನಿಮಾ ಮೂಲಕ ಭರವಸೆ ಮೂಡಿಸಿದ ನಿರ್ದೇಶಕ ಶಿವರಾಜ್ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ .

ಈ ಬಾರಿ ಮತ್ತೊಂದಿಷ್ಟು ಹೊಸತನದೊಂದಿಗೆ ಶಿವರಾಜ್ ಕಥೆ ರೆಡಿ ಮಾಡಿಕೊಂಡಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನಕ್ಕೆ ಸಕಲ ರೀತಿಯಲ್ಲೂ ಸಿದ್ದರಾಗಿದ್ದಾರೆ . ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಸದ್ಯದಲ್ಲೇ ಸಿನಿಮಾದ ಟೈಟಲ್ ರಿವೀಲ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ದೊಡ್ಡ ತಾರಾಬಳಗ ಸಿನಿಮಾದಲ್ಲಿರಲಿದ್ದು, ಡಿಸೆಂಬರ್ ಕೊನೆಯಲ್ಲಿ ಸಿನಿಮಾ ಸೆಟ್ಟೇರಲಿದೆ ಎಂದು ನಿರ್ದೇಶಕ ಶಿವರಾಜ್ ಹೇಳಿದ್ದಾರೆ .

ಥ್ರಿಲ್ಲರ್ ಜಾನರ್ ಒಳಗೊಂಡ ಈ ಚಿತ್ರದಲ್ಲಿ ಕಿಶೋರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ‘ಐ1’ ಸಿನಿಮಾದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟ ಕಿಶೋರ್ ಅವರಿಗೆ ಇದು ಎರಡನೇ ಸಿನಿಮಾ. ನಾಯಕಿಯರ ಹುಡುಕಾಟದಲ್ಲಿ ಚಿತ್ರತಂಡವಿದ್ದು, ಇಬ್ಬರು ನಾಯಕಿಯರು ಸಿನಿಮಾದಲ್ಲಿರಲಿದ್ದಾರೆ.

ಎಸ್ ಪಿ ಪಿಕ್ಚರ್ಸ್ ಬ್ಯಾನರ್ ನಡಿ ಶೈಲಜಾ ಪ್ರಕಾಶ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಈ ಬ್ಯಾನರ್ ನಲ್ಲಿ ಮೂಡಿ ಬರ್ತಿರುವ ಐದನೇ ಸಿನಿಮಾ ಇದಾಗಿದೆ. ಚಿತ್ರದ ತಾರಾಬಳಗದಲ್ಲಿ ರಂಗಾಯಣ ರಘು, ಸುಜಯ್ ಶಾಸ್ತ್ರಿ, ತೆಲುಗು ಹಾಗೂ ತಮಿಳು ಸಿನಿಮಾ ಖ್ಯಾತಿಯ ಮಧುಸೂದನ್ ಇರಲಿದ್ದಾರೆ .

ಝೀ ವಾಹಿನಿಯ ಸರಿಗಮಪ ಮೆಂಟರ್ ಸುಚೇತನ್ ರಂಗಸ್ವಾಮಿ ಸಂಗೀತ ನಿರ್ದೇಶನ, ಕಬ್ಜ, ಮಾರ್ಟಿನ್, ನಟ ಸಾರ್ವಭೌಮ ಖ್ಯಾತಿಯ ಮಹೇಶ್ ರೆಡ್ಡಿ ಸಂಕಲನ ಚಿತ್ರಕ್ಕಿದೆ. ಭರ್ಜರಿ ಚೇತನ್, ಜೋಗಿ ಪ್ರೇಮ್, ಅಲೆಮಾರಿ ಸಂತು ಹಾಗೂ ಹೊಸ ಪ್ರತಿಭೆ ಸಂತೋಷ್ ಸಾಹಿತ್ಯದಲ್ಲಿ ಚಿತ್ರದ ಹಾಡುಗಳು ಮೂಡಿ ಬರಲಿದ್ದು, ಬೆಂಗಳೂರು, ಮಂಗಳೂರು, ಮೈಸೂರು, ಉಡುಪಿಯಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...