ಜಸ್ಟ್ ಪಾಸ್ ಆಗಲು ಬರ್ತಿದ್ದಾರೆ ಕ್ಯೂಟ್ ಹುಡುಗಿ

Date:

ನಿರ್ದೇಶಕ ಕೆ.ಎಂ.ರಘು ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಗುರುತಿಸಿಕೊಂಡಿದ್ದ ವಿಶೇಷ ಡೈರೆಕ್ಟರ್ . ಈಗ ಹೊಸ ಸಬ್ಜೆಕ್ಟ್ ಹೊತ್ತು ಬಂದಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೇಳಲು ಸಿದ್ದರಾಗಿದ್ದಾರೆ . ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿದ್ದು, ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಚಿತ್ರಕ್ಕೆ ಇಡಲಾಗಿದೆ .


ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಇರುವುದೆಲ್ಲವ ಬಿಟ್ಟು, ಗಜಾನನ ಗ್ಯಾಂಗ್ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಮಾಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಚಿತ್ರಕ್ಕೆ ಹೀರೋಯಿನ್ ಹುಡುಕಾಟಲ್ಲಿದ್ದ ಚಿತ್ರತಂಡಕ್ಕೆ ಹೊಸ ಪ್ರತಿಭೆ ಪ್ರಣತಿ ನಾಯಕಿಯಾಗಿ ಸಿಕ್ಕಿದ್ದಾರೆ . ಡಾನ್ಸ್ ಕರ್ನಾಟಕ ಡಾನ್ಸ್, ಫ್ಯಾಮಿಲಿ ವಾರ್ ಸೀಸನ್ 2 ರನ್ನರ್ ಅಪ್ ಆಗಿರುವ ಪ್ರಣತಿ ಬ್ರಹ್ಮಗಂಟು ಸೀರಿಯಲ್ ನಲ್ಲೂ ನಟಿಸಿದ್ದರು . ಈಗ ಜಸ್ಟ್ ಪಾಸ್ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿಯಾಗ್ತಿದ್ದಾರೆ .

ಕೆ.ಎಂ ರಘು. ಮೊಲದ ಬಾರಿ ನಿರ್ದೇಶಕರು ಯೂತ್ ಫುಲ್ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದು, ಇದೇ ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿದೆ.


ರಾಯ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ ಜಸ್ಟ್ ಪಾಸ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಅರ್ಪಿತಾ, ಚಂದು ಶ್ರೀ, ಯಶಿಕಾ, ವಿಶ್ವಾಸ್, ನಿಖಿಲ್, ಗಗನ್, ಅಭಿ ಚಿತ್ರದ ತಾರಾಬಳಗದಲ್ಲಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಾಹಣ ಚಿತ್ರಕ್ಕಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...