NIAಯಲ್ಲಿ ಕೆಲಸ; 65000 ಸಂಬಳ!

0
87

ರಾಷ್ಟ್ರೀಯ ತನಿಖಾ ದಳ(National Investigation Agency) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ, ಒಟ್ಟು 28 ಕಾನ್ಸ್​​ಟೇಬಲ್(Constable)​ ಹುದ್ದೆಗಳು ಖಾಲಿ ಇದ್ದು, 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಡಿಸೆಂಬರ್ 17ರಂದು ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆಫ್​ಲೈನ್(Offline)​ ಮೂಲಕ ಅರ್ಜಿ ಹಾಕಬೇಕು. ಜನವರಿ 17, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.nia.gov.in ಗೆ ಭೇಟಿ ನೀಡಬಹುದು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/01/2022

: UPSC Recruitment 2021: 400 ಹುದ್ದೆಗಳಿಗೆ ಪರೀಕ್ಷೆ ಅಧಿಸೂಚನೆ ಹೊರಡಿಸಿದ UPSC, ಅರ್ಜಿ ಸಲ್ಲಿಸಲು ಹೀಗೆ ಮಾಡಿ

ವಿದ್ಯಾರ್ಹತೆ:
ರಾಷ್ಟ್ರೀಯ ತನಿಖಾ ದಳ ನೇಮಕಾತಿಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ ಪಾಸಾಗಿರಬೇಕು.

ವಯೋಮಿತಿ:
ರಾಷ್ಟ್ರೀಯ ತನಿಖಾ ದಳ ನೇಮಕಾತಿಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:
ರಾಷ್ಟ್ರೀಯ ತನಿಖಾ ದಳ ನೇಮಕಾತಿಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಂಡೀಗರ್, ಚೆನ್ನೈ, ಗುವಾಹಟಿ, ಹೈದಾರಾಬಾದ್, ಇಂಫಾಲ್, ಜಮ್ಮು, ಕೊಚ್ಚಿ, ಕೊಲ್ಕತ್ತಾ, ಲಕ್ನೋ, ಮುಂಬೈ, ನವದೆಹಲಿ, ರಾಂಚಿಯಲ್ಲಿ ಉದ್ಯೋಗ ನೀಡಲಾಗುತ್ತದೆ.

: KSMCL Recruitment 2021: ತಿಂಗಳಿಗೆ ₹ 36,000 ಸಂಬಳ, ಕರ್ನಾಟಕ ರಾಜ್ಯ ಮಿನರಲ್ಸ್​ ಕಾರ್ಪೊರೇಷನ್ ಲಿಮಿಟೆಡ್​​ನಲ್ಲಿ ಉದ್ಯೋಗ

ವೇತನ:
ರಾಷ್ಟ್ರೀಯ ತನಿಖಾ ದಳ ನೇಮಕಾತಿಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹21,700-69,100 ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಕೆಲಸ ಹುಡುಕುತ್ತಿದ್ದಾರಾ? ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಎಸ್​ಪಿ(ಅಡ್ಮಿನಿಸ್ಟ್ರೇಟಿವ್​)
ರಾಷ್ಟ್ರೀಯ ತನಿಖಾ ದಳ ಹೆಡ್​ ಕ್ವಾಟ್ರರ್ಸ್​
ಸಿಜಿಒ ಕಾಂಪ್ಲೆಕ್ಸ್​ ಎದುರು
ಲೋಧಿ ರಸ್ತೆ
ನವದೆಹಲಿ-110003

LEAVE A REPLY

Please enter your comment!
Please enter your name here