ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡರ ಮೂರನೇ ತಲೆಮಾರಿನ ರಾಜಕೀಯ ಪ್ರವೇಶ ಆಗುತ್ತಿದೆ.
ಎಚ್. ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಮಾತ್ರವಲ್ಲದೆ ಮುಖ್ಯಮಂತ್ರಿ ಎಚ್.ಡಿಕುಮಾರ ಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ ಸ್ವಾಮಿಕೂಡ ಸಕ್ರಿಯ ರಾಜಕೀಯಕ್ಕೆ ಬರಲಿದ್ದಾರೆ.
ಸಿನಿಮಾಗಳಲ್ಲಿ ಬ್ಯುಸಿ ಇರೋ ನಿಖಿಲ್ ಸದ್ಯಕ್ಕೆ ರಾಜಕೀಯಕ್ಕೆ ಬರಲ್ಲ ಅಂತಿದ್ದರು. ಆದರೆ, ಇದೀಗ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ .
ತಾನು ಮತ್ತು ತನ್ನ ಸಹೋದರ ಹೊರತಾಗಿ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ ಅಂತ ವಿಧಾಸಭಾ ಚುನಾವಣೆ ವೇಳೆ ಕುಮಾರಸ್ವಾಮಿ ಹೇಳಿದ್ದರು. ಆದರೆ, ಆಡಿದ ಆ ಮಾತನ್ನು ಉಳಿಸಿಕೊಳ್ಳಲು ಕುಮಾರ ಸ್ವಾಮಿ ತುಂಬಾನೇ ಕಷ್ಟಪಡಬೇಕಾಗಿ ಬಂದಿತ್ತು.
ಇದೀಗ ಲೋಕಸಭಾ ಚುನಾವಣೆಗೆ ಪ್ರಜ್ವಲ್, ನಿಖಿಲ್ ಸ್ಪರ್ಧಿಸಲು ದೊಡ್ಡಗೌಡರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆಯಂತೆ.
ಮಂಡ್ಯದಿಂದ ನಿಖಿಲ್ ಕುಮಾರ ಸ್ವಾಮಿ, ಮೈಸೂರಿನಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸೋದು ಬಹುತೇಕ ಖಚಿತವಾಗಿದೆ.