No menu items!
15.1 C
Munich
Saturday, June 13, 2026

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

Must read

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ವೈಯಕ್ತಿಕ ಸಹಾಯಕ (ಪಿಎ) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಪ್ರದೇಶದ ಲಾಡ್ಜ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತರನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದೆ. ಅವರು ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಮೃತ ಶಿವಕುಮಾರ್ ಹೆಚ್ಚು ಸಾಲ ಮಾಡಿಕೊಂಡಿದ್ದರೆಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದಷ್ಟೇ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು ಎನ್ನಲಾಗಿದೆ. ಘಟನೆ ನಡೆದ ದಿನ ಪತ್ನಿಗೆ ವಿಡಿಯೋ ಕಾಲ್ ಮಾಡಿ “ನನಗೆ ಜೀವನ ಸಾಕಾಗಿದೆ, ನಾನು ಸಾಯುತ್ತೇನೆ” ಎಂದು ಹೇಳಿದ್ದಾಗಿ ತಿಳಿದುಬಂದಿದೆ. ಬಳಿಕ ಫೆಬ್ರವರಿ 17ರಂದು ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (ಯುಡಿಆರ್) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article