ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರ ರೇಖಾಚಿತ್ರ ರಿಲೀಸ್.!

tnit editors
1 Min Read

ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರ ರೇಖಾಚಿತ್ರ ರಿಲೀಸ್.!

 

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಪ್ರವಾಸಿ ತಾಣ ಬೈಸರನ್‌ನಲ್ಲಿ ನಿನ್ನೆ ಉಗ್ರರು ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಸುಮಾರು 27 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದ ಒಬ್ಬರು ಸಹ ನಿನ್ನೆಯ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇಡೀ ದೇಶವೇ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದೆ.

ಇದೀಗ ಭೀಕರ ಹತ್ಯಾಕಾಂಡದಲ್ಲಿ ಭಾಗಿಯಾಗಿರುವ 3 ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಭೀಕರ ಭಯೋತ್ಪಾದಕ ದಾಳಿಯಲ್ಲಿ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಭಾಗಿಯಾಗಿದ್ದಾರೆಂದು ಶಂಕಿಸಲಾಗಿದೆ.

ಭದ್ರತಾ ಪಡೆಗಳು ಬೃಹತ್ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಮತ್ತು ಅರಣ್ಯ ಪ್ರದೇಶವನ್ನು ಬಳಸಿಕೊಂಡು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಭಯೋತ್ಪಾದಕರನ್ನು ಪತ್ತೆಹಚ್ಚಲು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿವೆ.

Share This Article