ಪೆಟ್ರೋಲ್, ಡೀಸೆಲ್ ಬೆಲೆ ಈಗಾಗಲೇ ಹೆಚ್ಚಾಗಿದೆ. ಈ ಮಧ್ಯೆ ಮತ್ತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಹೆಚ್ಚುತ್ತಲೇ ಇದ್ದು, ಕೆಲದಿನಗಳಲ್ಲಿ ಪೆಟ್ರೋಲ್ , ಡೀಸೆಲ್ ದರ ಪ್ರತಿ ಲೀಟರ್ ಗೆ 3ರಿಂದ 4 ರೂ ಹೆಚ್ಚಾಗುವ ಸಾಧ್ಯತೆ ಇದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 24 ರಿಂದ ಮೇ 14 ರವರೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಪರಿಷ್ಕರಣೆ ಆಗಿರ್ಲಿಲ್ಲ. ಈಗ ನಿತ್ಯ ಹೆಚ್ಚಾಗುತ್ತಿದೆ. ಇಂದು ಪ್ರತಿ ಲೀಟರ್ ಗೆ ಪೆಟ್ರೋಲ್ ಬೆಲೆ 78.12 ರೂ, ಡೀಸೆಲ್ ಬೆಲೆ 69.25 ರೂ ಇದೆ.
2ವರ್ಷದ ಹಿಂದೆ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ ಗೆ 40 ಡಾಲರ್ (ಅಂದಾಜು 2,700ರೂ) ಇತ್ತು. ಈಗ ಇದರ ಬೆಲೆ 79ಡಾಲರ್ ( ಅಂದಾಜು 5,300 ರೂ) ಆಗಿದೆ.

ಈ ಹಿಂದೆ ಪೆಟ್ರೋಲಿಯಂ ರಫ್ತು ರಾಷ್ಟ್ರಗಳ (ಒಪೆಕ್) ನಡುವೆ ಶೀತಲ ಸಮರವಿತ್ತು. ಹೀಗಾಗಿ ಈ ರಾಷ್ಟ್ರಗಳು ತೈಲ ಉತ್ಪಾದನೆಗೆ ಯಾವುದೇ ಮಿತಿ ಹಾಕಿರಲಿಲ್ಲ. ಆದರೆ, 2017 ರಲ್ಲಿ ಈ ರಾಷ್ಟ್ರಗಳು ಉತ್ಪಾದನೆಗೆ ಮಿತಿ ಹಾಕಿದ ಪರಿಣಾಮ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ದಿನವೂ ಏರಿಕೆ ಆಗ್ತಿದೆ. ತೈಲ ಉತ್ಪಾದಿಸುವ 14 ರಾಷ್ಟ್ರಗಳಲ್ಲಿ ಉತ್ಪಾದನೆ ಕಡಿಮೆಯಾಗಿದೆ ಎಂದು ಎಸ್ ಅಂಡ್ ಪಿ ಗ್ಲೋಬಲ್ ಪ್ಯಾಂಟ್ ಅಧ್ಯಯನದಿಂದ ತಿಳಿದುಬಂದಿದೆ.

ಈ ಹಿಂದೆ ಪ್ರತಿದಿನ 32 ದಶಲಕ್ಷ ಬ್ಯಾರೆಲ್ ಉತ್ಪಾದಿಸುತ್ತಿದ್ದರೆ ಏಪ್ರಿಲ್ ನಲ್ಲಿ 1.40 ದಶಲಕ್ಷ ಕಡಿಮೆಯಾಗಿದೆ. ವಿಶ್ವದೆಲ್ಲೆಡೆ ಭಾರೀ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಒಪೆಕ್ ರಾಷ್ಟ್ರಗಳು ಜೂನ್ಬ22ರಂದು ಸಭೆ ನಡೆಸಲು ತೀರ್ಮಾನಿಸಿವೆ. ಈ ವೇಳೆ ತೈಲ ಉತ್ಪಾದನೆಯ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.






