No menu items!
25.6 C
Munich
Thursday, August 6, 2026

ಪಿಜಿ ಮುಂದೆ ಮದ್ಯಪಾನ ಮಾಡುತ್ತಿದ್ದವರನ್ನು ಪ್ರಶ್ನಿಸಿದ್ದಕ್ಕೆ ಮಾಲೀಕನ ಹತ್ಯೆ

Must read

ಪಿಜಿ ಮುಂದೆ ಮದ್ಯಪಾನ ಮಾಡುತ್ತಿದ್ದವರನ್ನು ಪ್ರಶ್ನಿಸಿದ್ದಕ್ಕೆ ಮಾಲೀಕನ ಹತ್ಯೆ

ಬೆಂಗಳೂರು: ಪಿಜಿ (ಪೇಯಿಂಗ್ ಗಸ್ಟ್) ಮುಂದೆ ಮದ್ಯಪಾನ ಮಾಡುತ್ತಿದ್ದವರನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಪಿಜಿ ಮಾಲೀಕನನ್ನು ಬ್ಯಾಟ್‌ನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಮಾಧವ್ ಮೆಟ್ಲಿ (40) ಎಂದು ಗುರುತಿಸಲಾಗಿದೆ. ಅವರು ಕಸ್ತೂರಿಬಾ ನಗರದಲ್ಲಿ ಪಿಜಿ ನಡೆಸುತ್ತಿದ್ದರು. ಆರೋಪಿಗಳು ಪಿಜಿ ಮುಂದೆ ಮದ್ಯಪಾನ ಮಾಡುತ್ತಾ ಮಾತನಾಡುತ್ತಿದ್ದರು. ಈ ವೇಳೆ ಮಾಧವ್ ಮೆಟ್ಲಿ ಅವರನ್ನು ಪ್ರಶ್ನಿಸಿದ್ದು, ನಂತರ ಬ್ಯಾಟ್ ಹಿಡಿದುಕೊಂಡು ಸ್ಥಳಕ್ಕೆ ಬಂದಿದ್ದರು ಎನ್ನಲಾಗಿದೆ.
ಇದರಿಂದ ಆರೋಪಿಗಳು ಮತ್ತು ಮಾಧವ್ ಮೆಟ್ಲಿ ನಡುವೆ ವಾಗ್ವಾದ ಹಾಗೂ ಜಗಳ ನಡೆದಿದೆ. ಈ ಸಂದರ್ಭದಲ್ಲಿ ತಮಗೆ ಹಲ್ಲೆ ಮಾಡುವ ಭಯದಿಂದ ಆರೋಪಿಗಳು ಮಾಧವ್ ಅವರ ಕೈಯಲ್ಲಿದ್ದ ಬ್ಯಾಟ್ ಅನ್ನು ಕಸಿದುಕೊಂಡು ಅವರ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ಮಾಧವ್ ಮೆಟ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article