ಕೆರೆಗಳ ಸಂರಕ್ಷಣೆಗೆ ಮಹತ್ತರ ಹೆಜ್ಜೆ ಇಟ್ಟಿರುವ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ.
ಇನ್ನೇನು ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ ಗಣೇಶ ಚತುರ್ಥಿಗೆ. ಹಬ್ಬದ ಸಡಗರ, ವೈವಿಧ್ಯಮಯ ಗಣಪತಿ ಮೂರ್ತಿಗಳು, ಕಣ್ಣಿಗೆ ನಾಟುವಂತಹ ಕಲರ್ ಕಲರ್ ಗಣೇಶ ವಿಗ್ರಹಗಳು. ನೋಡೋದಕ್ಕೆ ಎರಡು ಕಣ್ಣುಗಳೇ ಸಾಲಲ್ಲ ಬಿಡಿ.. ಆದರೆ ಇವಕ್ಕೆಲ್ಲಾ ಫುಲ್‍ಸ್ಟಾಪ್ ಹಾಕಲು ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ದಿಟ್ಟ ನಿರ್ಧಾರಕ್ಕೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬಣ್ಣ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದರೆ ನಿಮ್ಮ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಲಿದ್ದಾರೆ ಹುಷಾರ್…!
ಹೌದು. ರಾಜ್ಯದ ಕೆರೆಗಳ ಸಂರಕ್ಷಣೆಗೆ ಮಹತ್ವದ ಹೆಜ್ಜೆ ಇಟ್ಟಿರುವ ಮಂಡಳಿ ಈ ಬಾರಿಯ ಗಣೇಶ ಚತುರ್ಥಿಗೆ ಪರಿಸರ ಸ್ನೇಹಿ ನೀತಿಯನ್ನು ಅನುಸರಿಸಲು ಮುಂದಾಗಿದೆ. ಹೊರ ರಾಜ್ಯಗಳಿಂದ ಬರುವ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳೂ ಸೇರಿದಂತೆ ಬಣ್ಣ ಲೇಪಿತ ವಿಗ್ರಹಗಳನ್ನು ಸಂಪೂರ್ಣವಾಗಿ ನೀಷೇಧಿಸಲು ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ ಜಲಕಾಯ್ದೆ 1974ರ ಅಧಿನಿಯಮ 33ಎ ಅಡಿಯಲ್ಲಿ ಆದೇಶ ಹೊರಡಿಸಿದೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳನ್ನು ಕೆರೆಯಲ್ಲಿ ಹಾಗೂ ಇತರೆ ಜಲ ಮೂಲಗಳಲ್ಲಿ ವಿಸರ್ಜನೆ ಮಾಡುವುದರಿಂದ ಆಗುವ ಮಾಲಿನ್ಯ ಹಾಗೂ ಅದರ ಪ್ರತಿಕೂಲ ಪರಿಣಾಮವನ್ನರಿತ ಮಂಡಳಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಅಲ್ಲದೇ ಇದನ್ನೂ ಮೀರಿ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹವನ್ನು ಮಾರಾಟ ಮಾಡಿದ್ದೇ ಆದಲ್ಲಿ ಮಾರಾಟ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳ ಪರವಾನಗಿಯನ್ನು ಹಿಂಪಡೆದು ಅವರ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಲಿದ್ದಾರೆ. ಅಲ್ಲದೇ ಹೊರ ರಾಜ್ಯಗಳಿಂದ ಗಣೇಶ ಮೂರ್ತಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಗಡಿ, ಠಾಣೆ, ಚೆಕ್ ಪೋಸ್ಟ್‍ನ ಅಧಿಕಾಗಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.
ಸ್ಥಳೀಯ ಸಂಸ್ಥೆಗಳು ಈ ಅಧಿಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸ್ ಇಲಾಖೆ ಸೂಕ್ತ ಕಾರ್ಯನಿರ್ವಹಿಸಲಿದೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕುರಿತು ಮಾಧ್ಯಮಗಳಲ್ಲಿ ಮತ್ತು ವೃತ್ತ ಪತ್ರಿಕೆಗಳಲ್ಲಿ ಜಾಹಿರಾತು ನೀಡಲಾಗುವುದು ಎಂದು ತಿಳಿಸಿದ್ದಾರೆ. ಸದ್ಯದಲ್ಲೇ ಈ ಆದೇಶ ಹೊರ ಬೀಳಲಿದೆ.
POPULAR STORIES :
ಕೇಂದ್ರ ಸರ್ಕಾರಿ ನೌಕರರೇ ಗಮನಿಸಿ… ನಿಮಗಿಲ್ಲ ಸರ್ಕಾರವನ್ನು ಟೀಕಿಸುವ ಅಧಿಕಾರ.!
ತಿಮ್ಮಪ್ಪನ ಉರುಳು ಸೇವೆಗೆ ಆಧಾರ್ ಕಡ್ಡಾಯ..!
ಇದು ಅಂಧ ಡಾಕ್ಟರ್‍ನ ಅಮೇಜಿಂಗ್ ಸ್ಟೋರಿ..!
ಹ್ಯಾಟ್ರಿಕ್ ಹೀರೋ ಶಿವಣ್ಣ ಕ್ರಿಕೆಟ್ ಆಡಿದ್ರು..! ಬ್ಯಾಟಿಂಗ್, ಬೌಲಿಂಗ್ ಮಾಡಿ ಮಿಂಚಿದ್ರು..,!
ಕೊನೆಯುಸಿರೆಳೆಯುತ್ತಿದ್ದ ಅವಳ ಮದುವೆಯಾಯ್ತು..! ಅವಳಿಷ್ಟದಂತೆ ಮದುವೆ, ಮುಂದೇನಾಯ್ತು?