No menu items!
24 C
Munich
Monday, May 4, 2026

PM ನರೇಂದ್ರ ಮೋದಿ ಅವರನ್ನು ಭೇಟಿ ಮಾಟಿದ ಸಿದ್ದರಾಮಯ್ಯ

Must read

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

 

ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.
ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.

- Advertisement -spot_img

More articles

- Advertisement -spot_img

Latest article