ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ವರ್ಗಾವಣೆ, ಆರ್. ಹಿತೇಂದ್ರ ನೂತನ ಆಯುಕ್ತ!

Must read

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ವರ್ಗಾವಣೆ, ಆರ್. ಹಿತೇಂದ್ರ ನೂತನ ಆಯುಕ್ತ!

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿ ನವೆಂಬರ್ 18ರಂದು ಆದೇಶ ಹೊರಡಿಸಿದೆ.
ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕಾಲ್ತುಳಿತ ದುರಂತದ ಬಳಿಕ ಆಯುಕ್ತರಾಗಿದ್ದ ಸೀಮಂತ್ ಕುಮಾರ್!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ನಂತರ ರಾಜ್ಯ ಸರ್ಕಾರ ಅಂದಿನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರನ್ನು ಅಮಾನತುಗೊಳಿಸಿತ್ತು.
ಬಳಿಕ ಬೆಂಗಳೂರು ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ 1996ರ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.
ಆರ್. ಹಿತೇಂದ್ರಗೆ ಬೆಂಗಳೂರು ಪೊಲೀಸ್ ಕಮಿಷನರ್ ಜವಾಬ್ದಾರಿ!
ಇದೀಗ ರಾಜ್ಯ ಸರ್ಕಾರ ಮತ್ತೊಮ್ಮೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಯಲ್ಲಿ ಬದಲಾವಣೆ ಮಾಡಿದೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳಕ್ಕೆ ವರ್ಗಾಯಿಸಿ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಜವಾಬ್ದಾರಿ ನೀಡಿದೆ.
ಈ ಮೂಲಕ ರಾಜಧಾನಿಯ ಪೊಲೀಸ್ ಇಲಾಖೆಯ ಪ್ರಮುಖ ಹುದ್ದೆಯಲ್ಲಿ ಮತ್ತೊಂದು ಬದಲಾವಣೆಯಾಗಿದ್ದು, ನೂತನ ಆಯುಕ್ತರಾಗಿ ಆರ್. ಹಿತೇಂದ್ರ ನೇಮಕಗೊಂಡಿದ್ದಾರೆ.

- Advertisement -spot_img

More articles

- Advertisement -spot_img

Latest article