ಸ್ವಾತಂತ್ರ್ಯ ದಿನಾಚರಣೆ ವೇಳೆ ಪೊಲೀಸ ಅಧಿಕಾರಿಗಳ ನಾಗಿಣಿ ಡ್ಯಾನ್ಸ್ – ವಿಡಿಯೋ ವೈರಲ್

Date:

ಸ್ವಾತಂತ್ರ್ಯ ದಿನಾಚರಣೆ ವೇಳೆ ನಡು ರಸ್ತೆಯಲ್ಲಿ ನಾಗಿಣಿ ಡ್ಯಾನ್ಸ್‌ ಮಾಡಿದ್ದ ಉತ್ತರ ಪ್ರದೇಶದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ. ಉತ್ತರ ಪ್ರದೇಶದ ಕೊತ್ವಾಲಿ ಜಿಲ್ಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‍ಸ್ಟೇಬಲ್ ನಾಗಿಣಿ ಡ್ಯಾನ್ಸ್‌ ಮಾಡಿದ್ದರು. ಈ ವೀಡಿಯೋವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು.

ವೀಡಿಯೋದಲ್ಲಿ ಪೊಲೀಸ್ ಅಧಿಕಾರಿಗಳು ಬ್ಯಾಂಡ್ ಸೆಟ್‍ಗಳ ಬೀಟ್‍ಗೆ ಸರಿಯಾಗಿ ನೃತ್ಯ ಮಾಡಿದ್ದಾರೆ. ಸಬ್-ಇನ್ಸ್‌ಪೆಕ್ಟರ್ ಪುಂಗಿ ಊದುತ್ತಿದ್ದರೆ, ಕಾನ್‍ಸ್ಟೇಬಲ್ ತಿರುಗುತ್ತಿರುತ್ತಾರೆ. ಇದೇ ವೇಳೆ ಹಲವಾರು ಪೊಲೀಸ್ ಸಿಬ್ಬಂದಿ ಪೊಲೀಸ್ ಅಧಿಕಾರಿಗಳಿಗೆ ಚಪ್ಪಾಳೆ ತಟ್ಟುತ್ತಿರುವುದನ್ನು ಕಾಣಬಹುದಾಗಿದೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಟ್ವಿಟರ್‌ನಲ್ಲಿ 76,000ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.

https://twitter.com/JaikyYadav16/status/1559393588944834562?t=qP5_Ne7tIbJojWd27XpI1Q&s=19

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...