ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆಯಿಂದ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಸ್ಕಾಂ ಸಿಬ್ಬಂದಿಗಳ ತುರ್ತು ಕಾಮಗಾರಿ ಹಿನ್ನೆಲೆ, ನಗರದ ಹಲವೆಡೆ ಪವರ್ ಕಟ್ ಮಾಡಲು ಮುಂದಾಗಿದೆ. ಅದರಂತೆ ಏರ್ ಫೋರ್ಸ್ ಆಸ್ಪತ್ರೆ, ದೊಮ್ಮಲೂರು, ಆಸ್ಟಿನ್ ಟೌನ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ವಿಜಾಜ್ ಬ್ಯಾಂಕ್, ಹೋಟೆಲ್ ತಾಜ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಕ್ರಾಸ್ ರೋಡ್, ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ವೈಜಿ ಪಾಳ್ಯ, ಕೆಎಸ್‌ಆರ್‌ಪಿ, ಐಟಿಸಿ ಹೋಟೆಲ್, ರಿಚ್ಮಂಡ್ ರಸ್ತೆ, ವನ್ನರ್‌ಪೇಟ್, ಜೀವನಶೈಲಿ, ಎಂಜಿ ರಸ್ತೆ, ಕಾನ್ವೆಂಟ್ ರಸ್ತೆ ಸೇರಿದಂತೆ ಹಲವೆಡೆ ಪವರ್ ಕಟ್ ಇರಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಬೆಸ್ಕಾಂ ಮನವಿ ಮಾಡಿದೆ.
ನಾಳೆಯಿಂದ ಎರಡು ದಿನ ಪವರ್ ಕಟ್
Date: