ನೇರವಾಗಿ ಸೋನಿಯಾ ಗಾಂಧಿ ಮೇಲೆ ವಾಗ್ದಾಳಿ ನಡೆಸಿದ ಜೋಶಿ

Date:

ಬೆಂಗಳೂರು : ವಿಪಕ್ಷ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ಈ ಸಂಬಂಧ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದರು.

ಈ ವೇಳೆ ಬಾಟ್ಲಾ ಹೌಸ್ ಶೂಟ್ ಔಟ್ ಪ್ರಕರಣವನ್ನು ನೆನಪಿಸಿರುವ ಅವರು, ನೇರವಾಗಿ ಸೋನಿಯಾ ಗಾಂಧಿ ಮೇಲೆ ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿಗೆ ಭಯೋತ್ಪಾದಕರ ಜೊತೆ ನಂಟಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಹಿಂದೆ ಸೋನಿಯಾ ಗಾಂಧಿ ಅಧಿಕಾರದಲ್ಲಿ ಇದ್ದಾಗ, ಮನಮೋಹನ್ ಸಿಂಗ್ ನಾಮಕಾವಸ್ಥೆಗೆ ಪ್ರಧಾನಿ ಆಗಿದ್ದರು.

ಆದರೆ ಅಧಿಕಾರ ನಡೆಸುತ್ತಾ ಇದ್ದದ್ದು ಮಾತ್ರ ಸೋನಿಯಾ ಗಾಂಧಿ ಎಂದು ಟೀಕಿಸಿದರು. ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಮಾಡುವ ಜನಪರ ಕೆಲಸಗಳು, ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಮಾಡುವ ಯೋಜನೆಗಳು ಜನರಿಗೆ ತಲುಪಬಾರದು ಎನ್ನುವ ಉದ್ದೇಶಕ್ಕೆ ಕಾಂಗ್ರೆಸ್‌ ಈ ರೀತಿ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.‌

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...