ಸಚಿವ ಪ್ರಮೋದ್ ಮಧ್ವರಾಜ್ ಅವರ ಚುನಾವಣಾ ಪ್ರಚಾರದ ವಾಹನವನ್ನು ಚುನಾವಣಾ ಆಯೋಗದ ಅಧಿಕಾರಿಗಳು ಸೀಜ್ ಮಾಡಿದ್ದಾರೆ…!
ಹೌದು ಚುನಾವಣೆ ಘೋಷಣೆಯಾಗಿ ನಿನ್ನೆಯಿಂದಲೇ ನೀತಿಸಂಹಿತೆ ಜಾರಿಯಾಗಿದ್ದು ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಚಿವರ ವಾಹನವನ್ನು ಮುಟ್ಟುಗೋಲು ಹಾಕಿದ್ದಾರೆ.
ಉಡುಪಿಯ ಪ್ರವಾಸಿ ಬಂಗಲೆಯಿಂದ ಪ್ರಚಾರಕ್ಕೆಂದು ಹೊರಟ ವಾಹನವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪರವಾನಗಿ ಪತ್ರ ರವಾನಿಸಲಾಗಿತ್ತು. ಆದರೆ, ಪ್ರಚಾರದ ಸ್ಥಳ, ಸಮಯ ನಿಗಧಿಪಡಿಸಿರಲಿಲ್ಲ. ಪರವಾನಗಿ ಪಡೆಯದೆ ಪ್ರಚಾರಕ್ಕೆ ಬಳಸಿದ ಆರೋಪದಡಿಯಲ್ಲಿ ನಗರ ಸಂಚಾರಿ ಪೊಲೀಸರು ವಾಹನವನ್ನು ಸೀಜ್ ಮಾಡಿದ್ದಾರೆ.
b