ಮೈಸೂರು ಸಂಸದ ಪ್ರತಾಪ್ ಸಿಂಹ ಈ ಬಾರಿ ಕಪ್ಪೂ ನಮ್ದೇ, ಸರ್ಕಾರವೂ ನಮ್ದೇ ಎಂದಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ ಎಸ್ ಯಡಿಯೂರಪ್ಪ ಅವರು ಆಯ್ಕೆಯಾಗಿದ್ದು, ಅವರು ನಾಳೆಯೇ ಸಿಎಂ ಆಗುತ್ತೇನೆ ಎಂದಿದ್ದಾರೆ.
ಶಾಸಕಾಂಗ ಪಕ್ಷದ ನಾಯನನ್ನಾಗಿ ನನ್ನನ್ನು ಆಯ್ಕೆ ಮಾಡಿದ್ದು, ಆ ಪ್ರತಿಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇನೆ. ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದೇರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಸರ್ಕಾರ ರಚಿಸುವ ಕುರಿತು ಸಂಸದ ಪ್ರತಾಪ್ ಸಿಂಹ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ ‘ಡಿಯರ್ ಆಲ್, ಕಪ್ಪೂ ನಮ್ದೇ, ಸರ್ಕಾರನೂ ನಮ್ದೇ’ ! ಎಂದಿದ್ದಾರೆ.
ಡಿಯರ್ ಆಲ್, ಕಪ್ಪೂ ನಮ್ದೇ, ಸರ್ಕಾರಾನೂ ನಮ್ದೇ!
— Pratap Simha (@mepratap) May 16, 2018