ಬ್ರಾಹ್ಮಣ ಸಮುದಾಯದ ವಿರುದ್ಧ ಪ್ರಗತಿಪರ ಚಿಂತಕ ಪ.ಮಲ್ಲೇಶ್ ನಿಂದನೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಶಂಕರ ಮಠದ ಬಳಿಯಿಂದ
ಬ್ರಾಹ್ಮಣ ಸಂಘ-ಸಂಸ್ಥೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಗನ್ಹೌಸ್ ವೃತ್ತ, ಚಾಮರಾಜ ಜೋಡಿ ರಸ್ತೆ, ನಾರಾಯಣಶಾಸ್ತ್ರಿ ರಸ್ತೆ, ದೇವರಾಜ ಅರಸು ರಸ್ತೆ ಮೂಲಕ ಸಾಗಿದ ಪ್ರತಿಭಟನಾ ಮೆರವಣಿಗೆ ಡಿಸಿ ಕಚೇರಿ ಬಳಿ ಅಂತ್ಯಗೊಂಡಿತು.
ಇನ್ನ ಮೆರವಣಿಗೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಸೇರಿ ಹಲವರು ಭಾಗಿಯಾಗಿದ್ರು.