ಪ್ರಿಯಾಂಕ ಖರ್ಗೆ ಅವರದ್ದು ಕೀಳು ಅಭಿರುಚಿ

Date:

ಪ್ರಿಯಾಂಕ ಖರ್ಗೆ ಅವರದ್ದು ಕೀಳು ಅಭಿರುಚಿಯ ಹೇಳಿಕೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಸರಕಾರಿ ನೌಕರಿ ಪಡೆಯಲು ಮಹಿಳೆಯರು ಮಂಚ ಏರಬೇಕು ಹಾಗೂ ಯುವಕರು ಲಂಚ ಕೊಡಬೇಕೆಂದು ಪ್ರಿಯಾಂಕ್ ಖರ್ಗೆ ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಕುಸಂಸ್ಕøತಿಯನ್ನು ಅನಾವರಣಗೊಳಿಸಿದ್ದಾರೆ. ಇದು ಭೂತದ ಬಾಯಿಯಲ್ಲಿ ಭಗವದ್ಗೀತೆ ಹೇಳಿದಂತಿದೆ ಎಂದು ಅವರು ಖಂಡಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಸ್ವತಃ ಭ್ರಷ್ಟಾಚಾರ ಮತ್ತು ಕುಸಂಸ್ಕøತಿಯ ಪದ ಬಳಸಿ ತಮ್ಮನ್ನು ಚಾಲ್ತಿಯಲ್ಲಿಡಲು ಬಯಸುತ್ತಿದ್ದಾರೆ. ಅವರು ಮಹಿಳೆಯರ ಕುರಿತು ಗೌರವದಿಂದ ಮಾತನಾಡಬೇಕು. ಈ ರೀತಿಯ ಅಸಭ್ಯ ಪದ ಬಳಸಿದ ಅವರ ವಿರುದ್ಧ ಕಾಂಗ್ರೆಸ್ ಪಕ್ಷವು ಉಗ್ರವಾದ ಕ್ರಮ ಕೈಗೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.
ಇದು ಸರ್ಕಾರಿ ನೌಕರಿಯಲ್ಲಿರುವ ಸಮಸ್ತ ಮಹಿಳಾ ಕುಲಕ್ಕೆ ಅವಮಾನ ಮಾಡಿದ ಹಾಗಿದೆ. ಇದರ ವಿರುದ್ಧ ಮಹಿಳಾ ಮೋರ್ಚಾವು ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟ ಹಮ್ಮಿಕೊಳ್ಳಲಿದೆ. ನಾಲಿಗೆಯ ಮೇಲೆ ಹಿಡಿತವಿಲ್ಲದ ಪ್ರಿಯಾಂಕ್ ಖರ್ಗೆಗೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...