ಮಲೆಯಾಳಂ ನಟಿ, ಕಣ್ಣಾಟದ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ ನೀಡಿದೆ.
ಪ್ರಿಯಾ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಚಿತ್ರದ ಹಾಡಿನ ವಿರುದ್ಧ ತೆಲಂಗಾಣದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ವಿಚಾರಣೆ ತಡೆಗೆ ಪ್ರಿಯಾ ಸೋಮವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರಾಜ್ಯಗಳಿಗೆ ತಮ್ಮ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸದಂತೆ ಮನವಿ ಮಾಡಿದ್ದರು. ನಿರ್ದೇಶಕರು ಸಹ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ದೀಪಕ್ ಮಿಶ್ರಾ , ನ್ಯಾ. ಎಎಂ ಖಾನ್ವಿಲ್ಕರ್ ಮತ್ತು ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಮುಂದಿನ ವಿಚಾರಣೆವರೆಗೆ ಕ್ರಿಮಿನಲ್ ವಿಚಾರಣೆ ನಡೆಸದಂತೆ ಆದೇಶಿಸಿದೆ.