PSI ನೇಮಕಾತಿ ಹಗರಣ ಸಂಬಂಧ ಅಕ್ಟೋಬರ್ ನಲ್ಲಿ ಎಲ್ಲ ಪ್ರಕರಣಗಳ ಚಾರ್ಜ್ ಶೀಟ್ ಆಗುತ್ತದೆ ಎಂದು ಬೆಂಗಳೂರು ಡಿಜಿ&ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಡಿಜಿ&ಐಜಿಪಿ ಕಚೇರಿಯಲ್ಲಿ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಹಗರಣ ಸಂಬಂಧದ ಎಲ್ಲ ಪ್ರಕರಣಗಳು ಅಕ್ಟೋಬರ್ ನಲ್ಲಿ ಚಾರ್ಜ್ ಶೀಟ್ ಆಗುತ್ತದೆ. ಆ ನಂತರ ಮರು ಪರೀಕ್ಷೆ ದಿನಾಂಕ ಅನೌನ್ಸ್ ಮಾಡುತ್ತೇವೆ. ಪ್ರಕರಣ ದಾಖಲಾಗಿ 90 ದಿನಗಳಲ್ಲಿ ಚಾರ್ಜ್ ಶೀಟ್ ಆಗಬೇಕು ಆನಂತರ ಮರು ಪರೀಕ್ಷೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ. ಇನ್ನೂ ಮತ್ತೊಂದೆಡೆ PSI ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಮರು ಪರೀಕ್ಷೆ ಬೇಡ ನಮಗೆ ನ್ಯಾಯ ಕೊಡಿಸಿ ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರ ಮರು ಪರೀಕ್ಷೆ ಮಾಡುವ ನಿರ್ಧಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ. ಹೀಗಾಗಿ PSI ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಮುಂದೆ ಯಾವ ರೀತಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುವುದನ್ನು ಕಾದು ನೋಡಬೇಕಾಗಿದೆ.