ಪರಪ್ಪನ ಅಗ್ರಹಾರ ಜೈಲಿನಲ್ಲಿ ಅತ್ಯಾಚಾರಿ, ಸೈಕೋ ಕಿಲ್ಲರ್ ಜೈಶಂಕರ್ ಬ್ಲೇಡಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
24 ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಜೈಶಂಕರ್ ರಾತ್ರಿ 2 ಗಂಟೆ ಸುಮಾರಿಗೆ ಬ್ಲೇಡಿನಿಂದ ಕತ್ತುಕೊಯ್ದುಕೊಂಡಿದ್ದ. ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
2013 ರಲ್ಲಿ ಜೈಲಿನಿಂದ ಪರಾರಿಯಾಗಿದ್ದ. ಕಾಲಿಗೆ ಗಾಯಮಾಡಿಕೊಂಡಿದ್ದ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದಿದ್ದ.