ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಅಂಜನೀಪುತ್ರ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ, ಪುನೀತ್ ಅವರ ಮುಂದಿನ ಸಿನಿಮಾ ಯಾವುದು ಎಂಬುದು ತಿಳಿಯುವ ಕುತೂಹಲ ಅಭಿಮಾನಿಗಳಲ್ಲಿದೆ.
ಫ್ಯಾಮಿಲಿ ಪವರ್ ರಿಯಾಲಿಟಿ ಶೋ ಮತ್ತು ಪಿ.ಆರ್ ಕೆ ಬ್ಯಾನರ್ ಕೆಲಸದಲ್ಲಿ ಬ್ಯುಸಿಯಾಗಿರುವ ಅಪ್ಪು ಕಾಲಿವುಡ್ ಡೈರೆಕ್ಟರ್ ಜೊತೆ ಕೆಲಸ ಮಾಡ್ತಾರೆ ಎಂದು ಹೇಳಲಾಗುತ್ತಿತ್ತು. ಅಷ್ಟೇ ಅಲ್ಲದೆ ಶಶಾಂಕ್ ನಿರ್ದೇಶನದ ಚಿತ್ರಕ್ಕೆ ಬಣ್ಣಹಚ್ಚುತ್ತಾರೆ ಎಂಬ ಸುದ್ದಿಯೂ ಬಂದಿತ್ತು.
ಆದರೆ ಈಗ ಈ ಎಲ್ಲಾ ಅಂತೆಕಂತೆಗಳನ್ನು ದಾಟಿ ಪವನ್ ಒಡೆಯರ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ರಣವಿಕ್ರಮದಲ್ಲಿ ಅಪ್ಪುಗೆ ಆ್ಯಕ್ಷನ್ ಕಟ್ ಹೇಳಿದ್ದ ಪವನ್ ಮತ್ತೊಮ್ಮೆ ಪುನೀತ್ ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಇದು ಹಾರಾರ್ ಸಿನಿಮಾವಾಗಿದ್ದು, ಅಪ್ಪು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಮೊದಲ ಬಾರಿಗೆ ಹಾರಾರ್ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.