ಪವರ್​ ಸ್ಟಾರ್ ಇಲ್ಲದ ಎಂಟು ತಿಂಗಳು

Date:

ಬೆಂಗಳೂರು : ಕನ್ನಡ ಚಿತ್ರರಂಗದ ನಟ ಪವರ್​ ಸ್ಟಾರ್ ಪುನೀತ್​ ರಾಜ್​ಕುಮಾರ್ ನಿಧನರಾಗಿ ಇಂದಿಗೆ ಎಂಟು ತಿಂಗಳು ಕಳೆದಿದೆ. ಈ ಹಿನ್ನೆಲೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ರಾಜ್ ಕುಟುಂಬಸ್ಥರು ಪುನೀತ್ ಸಮಾಧಿಗೆ ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಪ್ಪು ಸಮಾಧಿಗೆ ಅಶ್ವಿನಿ ಪುನೀತ್ ರಾಜಕುಮಾರ್, ಯುವರಾಜ್ ರಾಘವೇಂದ್ರ ಕುಮಾರ್ ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

 

 

ಪುನೀತ್ ರಾಜಕುಮಾರ್ ಅಕಾಲಿಕ ಮರಣ ಹೊಂದಿ 8 ತಿಂಗಳಾದರೂ ಸಹ ಇಂದಿಗೂ ಅವರು ಬದುಕಿಲ್ಲ ಎಂಬ ಸತ್ಯವನ್ನು ಯಾರಿಂದಲೂ ನಂಬಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರತಿನಿತ್ಯ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ತೆರಳಿ ಪುನೀತ್ ರಾಜಕುಮಾರ್ ಅವರ ಸಮಾಧಿ ದರ್ಶನ ಮಾಡುತ್ತಾ ಬಂದಿದ್ದಾರೆ.

 

 

 

ಅಲ್ಲದೇ ಪುನೀತ್ ಸತ್ತು ಇಂದಿಗೆ ಎಂಟು ತಿಂಗಳುಗಳು ಕಳೆದಿರುವ ಹಿನ್ನೆಲೆಯಲ್ಲಿ ಅಪಾರ ಅಭಿಮಾನಿಗಳು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...