No menu items!
18.8 C
Munich
Wednesday, July 29, 2026

ಮಳೆಯನ್ನು ಲೆಕ್ಕಿಸದ ಭಾರತದ ಅಥ್ಲೀಟ್ʼಗಳ ಸಾಹಸ; ಗುಲ್ವೀರ್ ಸಿಂಗ್, ಹರ್ಜಿಂದರ್ ಕೌರ್ʼಗೆ ಕಾಮನ್ವೆಲ್ತ್ ಗೇಮ್ಸ್ʼನಲ್ಲಿ ಬೆಳ್ಳಿ ಪದಕ

Must read

ಮಳೆಯನ್ನು ಲೆಕ್ಕಿಸದ ಭಾರತದ ಅಥ್ಲೀಟ್ʼಗಳ ಸಾಹಸ; ಗುಲ್ವೀರ್ ಸಿಂಗ್, ಹರ್ಜಿಂದರ್ ಕೌರ್ʼಗೆ ಕಾಮನ್ವೆಲ್ತ್ ಗೇಮ್ಸ್ʼನಲ್ಲಿ ಬೆಳ್ಳಿ ಪದಕ

ಗ್ಲಾಸ್ಗೊ: 2026ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದ್ದು, ಅಥ್ಲೆಟಿಕ್ಸ್ ಹಾಗೂ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಮತ್ತೆರಡು ಬೆಳ್ಳಿ ಪದಕಗಳು ಲಭಿಸಿವೆ. ಪುರುಷರ 10,000 ಮೀಟರ್ ಓಟದಲ್ಲಿ ಗುಲ್ವೀರ್ ಸಿಂಗ್ ಹಾಗೂ ಮಹಿಳೆಯರ 69 ಕೆಜಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಹರ್ಜಿಂದರ್ ಕೌರ್ ಬೆಳ್ಳಿ ಪದಕ ಗೆದ್ದು ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಪುರುಷರ 10,000 ಮೀಟರ್ ಓಟದಲ್ಲಿ ಗುಲ್ವೀರ್ ಸಿಂಗ್ ಐತಿಹಾಸಿಕ ಸಾಧನೆ ಮಾಡಿದರು. ಕಾಮನ್ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಈ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ದಾಖಲೆಯನ್ನು ಅವರು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಸ್ಕಾಟ್ಲೆಂಡ್ನಲ್ಲಿ ಸುರಿದ ಭಾರೀ ಮಳೆ ಹಾಗೂ ನೀರು ತುಂಬಿದ್ದ ಟ್ರ್ಯಾಕ್ ನಡುವೆಯೂ ಅದ್ಭುತ ಪ್ರದರ್ಶನ ನೀಡಿದ ಗುಲ್ವೀರ್, ಆರಂಭದಿಂದಲೇ ಮುಂಚೂಣಿಯಲ್ಲಿದ್ದು ಕೊನೆಯ ಕ್ಷಣದವರೆಗೂ ಚಿನ್ನಕ್ಕಾಗಿ ಹೋರಾಡಿದರು. ಅವರು 27 ನಿಮಿಷ 49.78 ಸೆಕೆಂಡುಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗೆದ್ದರೆ, ಆಸ್ಟ್ರೇಲಿಯಾದ ಕೈ ರಾಬಿನ್ಸನ್ 27 ನಿಮಿಷ 48.93 ಸೆಕೆಂಡುಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಡೇವಿಡ್ ಮುಲ್ಲಾರ್ಕಿ ಕಂಚಿನ ಪದಕಕ್ಕೆ ತೃಪ್ತಿಪಟ್ಟರು.
ಇನ್ನೊಂದೆಡೆ ಮಹಿಳೆಯರ 69 ಕೆಜಿ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಹರ್ಜಿಂದರ್ ಕೌರ್ ಅಮೋಘ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದರು. 2022ರ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ನಲ್ಲಿ 71 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದ ಹರ್ಜಿಂದರ್, ಈ ಬಾರಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕದೊಂದಿಗೆ ಮಿಂಚಿದರು.
29 ವರ್ಷದ ಹರ್ಜಿಂದರ್ ಕೌರ್ ಅವರ ಈ ಸಾಧನೆಯೊಂದಿಗೆ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಭಾರತ ತನ್ನ ಏಳನೇ ಪದಕವನ್ನು ಗೆದ್ದಂತಾಗಿದೆ. ಈ ವಿಭಾಗದಲ್ಲಿ ಕೆನಡಾದ ಶಾರ್ಲೆಟ್ ಸಿಮೋನ್ಯು ಚಿನ್ನದ ಪದಕ ತಮ್ಮದಾಗಿಸಿಕೊಂಡರು.
ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಅಥ್ಲೀಟ್ಗಳು ವಿವಿಧ ವಿಭಾಗಗಳಲ್ಲಿ ಪದಕಗಳನ್ನು ಗೆಲ್ಲುವ ಮೂಲಕ ದೇಶದ ಪದಕ ಬೇಟೆಯನ್ನು ಯಶಸ್ವಿಯಾಗಿ ಮುಂದುವರಿಸಿದ್ದು, ಮುಂದಿನ ಸ್ಪರ್ಧೆಗಳ ಮೇಲೂ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

- Advertisement -spot_img

More articles

- Advertisement -spot_img

Latest article