ರಾಹುಲ್ ನೇತೃತ್ವದ ಪ್ರತಿಭಟನೆ ಮುಂದೂಡಿಕೆ: ಆಗಸ್ಟ್ 5ರ ಬದಲು ಆಗಸ್ಟ್ 8ಕ್ಕೆ

Date:

ರಾಹುಲ್ ನೇತೃತ್ವದ ಪ್ರತಿಭಟನೆ ಮುಂದೂಡಿಕೆ: ಆಗಸ್ಟ್ 5ರ ಬದಲು ಆಗಸ್ಟ್ 8ಕ್ಕೆ

 

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಮತ ಕಳ್ಳತನ ನಡೆದಿದೆ ಎಂಬ ಗಂಭೀರ ಆರೋಪವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಂಸತ್‌ನಲ್ಲಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಗಸ್ಟ್ 5ರಂದು ನಡೆಯಬೇಕಾದ ಪ್ರತಿಭಟನಾ ಸಮಾವೇಶವನ್ನು ಈಗ ಮುಂದೂಡಲಾಗಿದೆ.

‘‘ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’’ ಎಂಬ ಧ್ಯೇಯದಡಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆಗಳೂ ನಡೆದಿದ್ದರೂ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನ ಹಿನ್ನೆಲೆ, ಸಮಾವೇಶವನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಶಿಬು ಸೊರೇನ್ ಅವರಿಗೆ ಅಂತಿಮ ನಮನ ಸಲ್ಲಿಸಲು ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಾರ್ಖಂಡ್‌ಗೆ ತೆರಳುತ್ತಿರುವುದರಿಂದ ಸಮಾವೇಶವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...