ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಚುಮಾವಣಾ ಅಖಾಡಕ್ಕೆ ಇಳಿಯಲಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ರಾಜ್ಯದ ಲೋಕಸಭಾ ಕ್ಷೇತ್ರವೊಂದರಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯ ಕಾಂಗ್ರೆಸ್ ನಾಯಕರು ಈ ಬಗ್ಗೆ ರಾಹುಲ್ ಅವರಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಬೀದರ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗಿದೆ. ರಾಹುಲ್ ರಾಜ್ಯದಿಂದ ಕಣಕ್ಕಿಳಿಯಲು ನಿರ್ಧರಿಸಿದರೆ, ಇಂದಿರಾಗಾಂಧಿ, ಸೋನಿಯಾಗಾಂಧಿ ಬಳಿಕ ದಕ್ಷಿಣಭಾರತದಲ್ಲಿ ಸ್ಪರ್ಧಿಸಿದ ನೆಹರು ಕುಟುಂಬದ ಮೂರನೇಯವರಾಗಲಿದ್ದಾರೆ.
ಬೀದರ್ ನಿಂದ 2009ರಲ್ಲಿ ಮಾಜಿಮುಖ್ಯಮಂತ್ರಿ ಧರ್ಮಸಿಂಗ್ ಗೆದ್ದಿದ್ದರು.2014ರಲ್ಲಿ ಬಿಜೆಪಿಯ ಭಗವತ್ ಖೂಬಾ ಗೆದ್ದಿದ್ದಾರೆ.