ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಬೀದರ್, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು,

ರಾಮನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಕರ್ನಾಟಕದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.






