No menu items!
11.2 C
Munich
Friday, April 17, 2026

ರಾಜಧಾನಿ ಬೆಂಗಳೂರಿನಲ್ಲಿ ಇನ್ಮುಂದೆ ಮತ್ತೆ ಜೋರು ಮಳೆ…!

Must read

ರಾಜಧಾನಿ ಬೆಂಗಳೂರಿಗೆ ಜುಲೈ 30ರವರೆಗೆ ಜೋರು ಮಳೆ ನಿರೀಕ್ಷೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗುವ ಲಕ್ಷಣಗಳು ಇವೆ. ಆದ್ದರಿಂದ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರದಿಂದ ಶನಿವಾರವರೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಮೋಡ ಮುಸುಕಿದ, ಚಳಿಯ ವಾತಾವರಣ ನಿರ್ಮಾಣವಾಗಲಿದೆ. ತಾಪಮಾನ ಗರಿಷ್ಠ 30ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ ಎನ್ನಲಾಗಿದೆ. ಅರಬ್ಬಿ ಸಮುದ್ರ, ಮಹಾರಾಷ್ಟ್ರ ಕಡೆಗಿನ ಸಮುದ್ರ ಭಾಗದಲ್ಲಿ ಮಾತ್ರ ವೈಪರಿತ್ಯಗಳು ಕಂಡು ಬಂದಿದ್ದರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ದಾಖಲಾಗಿತ್ತು. ಇದೀಗ ತಮಿಳುನಾಡಿನ ಒಳಭಾಗದಲ್ಲಿ ಸಮುದ್ರ ಮೇಲ್ಮೈ ಸುಳಿಗಾಳಿ ಎದ್ದಿದೆ.

ಇದರ ಪ್ರಭಾವ ಮುಂದಿನ ಐದು ದಿನ ಇರಲಿದೆ. ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ವ್ಯಾಪ್ತಿಗೆ ಬರುವ ಬೆಂಗಳೂರು ನಗರದಲ್ಲಿ ಮಳೆ ಜೋರಾಗುವ ಲಕ್ಷಣಗಳು ಇವೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article