ಮಳೆಗೆ ಪ್ರಾಣಹಾನಿ …!

0
28

ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ 73 ಜನರು ಬಲಿಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 14 ಜಿಲ್ಲೆಯಲ್ಲಿ ಪ್ರವಾಹ ಪಿಡಿತ ಪ್ರದೇಶವಾಗಿದೆ. ಈಗಾಗಲೇ 161 ಗ್ರಾಮ 21,727 ಜನರು ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅತಿವೃಷ್ಠಿಯಿಂದ ಈವರೆಗೆ 73 ಜನರು ಸಾವನ್ನಪ್ಪಿದ್ದಾರೆ. ಸಿಡಿಲುಬಡಿದು 15 ಜನರು, ಮರಬಿದ್ದು 5 ಜನರು ಸಾವನ್ನಪ್ಪಿದ್ದಾರೆ. ಮನೆ ಕುಸಿದು 19 , ಪ್ರವಾಹಕ್ಕೆ ಸಿಲುಕಿ 24ಜನರು ಸಾವು. ಭೂಕುಸಿತದಿಂದ 9, ವಿದ್ಯುತ್‌ ತಗುಲಿ ಓರ್ವ ಸಾವನ್ನಪ್ಪಿದ್ದಾನೆ. ಪ್ರವಾಹ ಪೀಡಿತ ಪ್ರದೇಶದಿಂದ 8197 ಸ್ಥಳಾಂತರ ಮಾಡಲಾಗಿದೆ. ಕಾಳಜಿ ಕೇಂದ್ರದಲ್ಲಿ ಈವರೆಗೆ 7386ಜನರು ಆಶ್ರಯ ಪಡೆದಿದ್ದಾರೆ. ಮಳೆಯಿಂದಾಗಿ 666 ಮನೆಗಳು ಸಂಪೂರ್ಣ ಹಾನಿ ಆಗಿದೆ. 2949 ಮನೆಗಳಿಗೆ ತೀವ್ರ ಹಾನಿಯಾಗಿದೆ. 17,750 ಮನೆಗಳು ಭಾಗಶಃ ಹಾನಿಯಾಗಿದೆ. ಮಳೆಯಿಂದ ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು. ಎಸ್‌ಡಿಆರ್‌ಎಫ್‌ ಮತ್ತು ಎನ್‌ಡಿಆರ್‌ ಎಫ್‌ನಿಂದ 4 ಲಕ್ಷ , ಸರ್ಕಾರದಿಂದ 1 ಲಕ್ಷ ನೀಡಲಾಗುವುದು. ಎಲ್ಲಾ ಡಿಜಿಗಳ ಖಾತೆಯಲ್ಲಿ 10 ಕೋಟಿ ರೂ ಹಣವಿದೆ. ಕಾಳಜಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ವಿತರಣೆಗೆ ಸೂಚನೆ. ಲಂಬಾಣಿ ತಾಂಡಾ ಗ್ರಾಮ ಎಂದು ಘೋಷಿಸಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here