ಬೆಂಗಳೂರಿನಲ್ಲಿ ಇಂದು ವಿವಿಧ ಪ್ರದೇಶಗಳಲ್ಲಿ ಹಗುರ ಮಳೆ ದಾಖಲಾಗಿದೆ. ಈ ಮಳೆ ಮುಂದಿನ ಎರಡು ದಿನವೂ ಹೀಗೆ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮತ್ತೆ ಮುಂಗಾರು ಚುರುಕುಗೊಂಡಿದೆ. ಈ ಕಾರಣಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಅಬ್ಬರಿಸುತ್ತಿದೆ. ಬಂಗಾಳಕೊಲ್ಲಿ ಸಮುದ್ರಮಟ್ಟದಲ್ಲಿ ಉಂಟಾದ ಬದಲಾವಣೆಗಳು ಇದಕ್ಕೆ ಕಾರಣ ಎನ್ನಲಾಗಿದೆ. ಇದಲ್ಲದೆ ಆಂಧ್ರ ಪ್ರದೇಶದ ಕರಾವಳಿ ಭಾಗದ ಹಾಗೂ ರಾಯಸೀಮಾದಿಂದ ಕನ್ಯಾಕುಮಾರಿವರೆಗೆ ಉಂಟಾಗಿದ್ದ ಮೇಲ್ಮೈ ಸುಳಿಗಾಳಿ ತೀವ್ರತೆಯಿಂದಾಗಿ ಮುಂಗಾರು ಮಳೆ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಬಹುತೇಕ ಎಲ್ಲ ಕಡೆಗಳಲ್ಲಿ ಮಂಗಳವಾರ ದವರೆಗೆ ಮಳೆ ಹುಗರದಿಂದ ಸಾಧಾರಣವಾಗಿ, ಕೆಲವು ಕಡೆಗಳಲ್ಲಿ ಜೋರ ಮಳೆ ಅಬ್ಬರಿಸುವ ಮುನ್ಸೂಚನೆ ಇದೆ. ಈ ಅವಧಿಯಲ್ಲಿ ಉಷ್ಣಾಂಶದಲ್ಲಿ ಇಳಿಕೆ ಕಂಡು ಬರಲಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 20ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.
ವಿವಿಧ ಪ್ರದೇಶಗಳಲ್ಲಿ ಹಗುರ ಮಳೆ
Date: