No menu items!
5.2 C
Munich
Friday, April 24, 2026

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ

Must read

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಅದರಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 2 ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಇಂದಿನಿಂದ ಆಗಸ್ಟ್ 25ರವರೆಗೆ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆ ಆಗುವ ಸಂಭವವಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article