ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಕಡೆ ಸದ್ಯ ಬಿಸಿಲು ಮೋಡದಿಂದ ಕೂಡಿದ ವಾತಾವರಣ ನಿರ್ಮಾಣವಾಗಿದ್ದು, ಕೆಲವು ಕಡೆ ತುಂತುರು ಮಳೆಯಾಗಿದೆ. ದಸರಾ ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಮಳೆರಾಯ ತಂಪೆರೆಯಲಿದ್ದಾನೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಹಲವು ಕಡೆ ಮಳೆ ಮುಂದಿವರೆಯಲಿದೆ
Date: