ಧಾರಕಾರ ಮಳೆ: ರಸ್ತೆಯಲ್ಲಿ ಹೋಗುತ್ತಿದ್ದ ಸವಾರನ ಮೇಲೆ ಬಿದ್ದ ಮರ – ವ್ಯಕ್ತಿ ಸಾವು! 

Date:

ಧಾರಕಾರ ಮಳೆ: ರಸ್ತೆಯಲ್ಲಿ ಹೋಗುತ್ತಿದ್ದ ಸವಾರನ ಮೇಲೆ ಬಿದ್ದ ಮರ – ವ್ಯಕ್ತಿ ಸಾವು!

 

ಚಿಕ್ಕಮಗಳೂರು:- ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಎಲೆಕಲ್ ಘಾಟಿ ಬಳಿ ನಡೆದಿದೆ.

 

ಅನಿಲ್ ಪಾಯ್ಸ್ (55) ಮೃತ ದುರ್ದೈವಿ. ಮೃತ ಅನಿಲ್ ಬೈಕ್‌ನಲ್ಲಿ ಬಾಳೆಹೊನ್ನೂರಿಗೆ ಹೋಗುತ್ತಿದ್ದರು. ಈ ವೇಳೆ ಎಲೆಕಲ್ ಘಾಟಿ ಬಳಿ ಹೋಗುವಾಗ ಭಾರೀ ಗಾಳಿ-ಮಳೆಗೆ ಮರ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಬಾಳೆಹೊನ್ನೂರು ಪಿಎಸ್‌ಐ ರವೀಶ್ ಭೇಟಿ ನೀಡಿ, ಅಗ್ನಿಶಾಮಕ ವಾಹನದಲ್ಲೇ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿದ್ದರು. ಆದರೆ ತಲೆಗೆ ಭಾರೀ ಪೆಟ್ಟು ಬಿದ್ದ ಪರಿಣಾಮ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

 

ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...