No menu items!
17 C
Munich
Saturday, May 2, 2026

ಇಂದೂ ಮಳೆ ಸಾಧ್ಯತೆ: ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Must read

ಇಂದೂ ಮಳೆ ಸಾಧ್ಯತೆ: ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬೇಸಿಗೆ ಅವಧಿಯಲ್ಲಿಯೇ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ.
ಯೆಲ್ಲೋ ಅಲರ್ಟ್ ಘೋಷಿಸಿದ ಜಿಲ್ಲೆಗಳು
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ವಿಜಯನಗರ, ದಾವಣಗೆರೆ, ಬಳ್ಳಾರಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಗುಡುಗು, ಗಾಳಿ ಜೋರಾಗುವ ಸಾಧ್ಯತೆ
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನೂ ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದೆ.
ಸಾರ್ವಜನಿಕರಿಗೆ ಸೂಚನೆ
ಮಳೆ, ಗಾಳಿ ಮತ್ತು ಗುಡುಗು ಹಿನ್ನೆಲೆ ಅನಗತ್ಯವಾಗಿ ಹೊರಗೆ ತೆರಳುವುದನ್ನು ತಪ್ಪಿಸಲು, ಮರಗಳ ಕೆಳಗೆ ನಿಲ್ಲದಂತೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸಲು ಹವಾಮಾನ ಇಲಾಖೆ ಸೂಚಿಸಿದೆ.

- Advertisement -spot_img

More articles

- Advertisement -spot_img

Latest article