ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಎಚ್ಚರಿಕೆ; ಕೊಡಗು, ಶಿವಮೊಗ್ಗ ಸೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕರಾವಳಿ ಭಾಗದಲ್ಲೂ ಮಳೆಯ ಅಬ್ಬರ ಮುಂದುವರಿಯಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಇನ್ನೊಂದೆಡೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಶುಷ್ಕ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಬೆಂಗಳೂರು ಸೇರಿದಂತೆ ಮೈಸೂರು, ಬಳ್ಳಾರಿ, ಹಾಸನ, ಚಾಮರಾಜನಗರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಮಳೆಯ ಹಿನ್ನೆಲೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ವಿಶೇಷವಾಗಿ ಬಿರುಗಾಳಿ ಮತ್ತು ಸಿಡಿಲಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಎಚ್ಚರಿಕೆ; ಕೊಡಗು, ಶಿವಮೊಗ್ಗ ಸೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್



