No menu items!
33 C
Munich
Friday, June 19, 2026

ಕರ್ನಾಟಕದಲ್ಲಿ ಮುಂದಿನ 24 ಗಂಟೆ ಹವಾಮಾನ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

Must read

ಕರ್ನಾಟಕದಲ್ಲಿ ಮುಂದಿನ 24 ಗಂಟೆ ಹವಾಮಾನ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನದಲ್ಲಿ ಭಾರಿ ಏರುಪೇರಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಖ್ಯವಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ರೈತರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹವಾಮಾನದ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದ್ದು, ಗಂಟೆಗೆ 50–60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಕೊಪ್ಪಳ ಜಿಲ್ಲೆಯಲ್ಲಿ ಕೂಡ 40–50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗಬಹುದು.
ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40–50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 30–40 ಕಿ.ಮೀ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಜಿಟಿಜಿಟಿ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಸೂಚಿಸಿದೆ.

- Advertisement -spot_img

More articles

- Advertisement -spot_img

Latest article